ಐಎಎಸ್ ಅಧಿಕಾರಿ ನಕುಲ್ ಕೇಂದ್ರಕ್ಕೆ

December 18, 2020

ನವದೆಹಲಿ ಡಿ.18 : ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಎಸ್.ಎಸ್.ನಕುಲ್ ಅವರನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಎರಡು ವರ್ಷಗಳಿಂದ ಬಳ್ಳಾರಿ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿಯಾಗಿರುವ ನಕುಲ್ ಪಂಚಾಯತ್ ಚುನಾವಣೆಯ ನಂತರ ಸೇವೆಗೆ ನಿಯೋಜಿತರಾಗಲಿದ್ದಾರೆ.
ಕರ್ನಾಟಕದಿಂದ ಆಯ್ಕೆಯಾಗಿರುವ ರಾಜ್ಯಸಭೆ ಸದಸ್ಯೆಯಾದ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕದ ಐಎಎಸ್ ಅಧಿಕಾರಿಯೊಬ್ಬರು ಖಾಸಗಿ ಕಾರ್ಯದರ್ಶಿ ಆಗುತ್ತಿರುವುದು ರಾಜ್ಯದ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ.

error: Content is protected !!