ಬ್ರಾಹ್ಮಣ ಸಮುದಾಯದ ಭಾವನೆಗೆ ಘಾಸಿ

December 18, 2020

ಬೆಂಗಳೂರು ಡಿ.18 : ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಾಹ್ಮಣ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಬಹುದಾದ ಪಠ್ಯಭಾಗವನ್ನು ತಕ್ಷಣದಿಂದಲೇ ಕೈಬಿಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆರನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪಾಠ-7ರ ಅಂಶಗಳನ್ನು ಉಲ್ಲೇಖಿಸಿ ಈ ಪಠ್ಯಭಾಗ ಬ್ರಾಹ್ಮಣ ಜನಾಂಗದ ಭಾವನೆಗಳನ್ನುಂಟು ಮಾಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸಂಕೀರ್ಣ ಪಠ್ಯಭಾಗವನ್ನು ತಕ್ಷಣದಿಂದಲೇ ಕೈಬಿಡುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಇಂದೇ ಅಗತ್ಯ ಸುತ್ತೋಲೆ ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಯುಕ್ತರಿಗೆ ಸೂಚಿಸಿ ಟಿಪ್ಪ ಣಿ ನೀಡಲಾಗಿದೆ.ಇಲಾಖೆಯ 1ರಿಂದ 10ನೇ ತರಗತಿಯ ಸಮಾಜ ವಿಜ್ಞಾನ,ಭಾಷಾ ವಿಷಯಗಳ ಯಾವುದೇ ಪಠ್ಯ ಗಳಲ್ಲಿ ಇರಬಹುದಾದ ಇಂತಹ ಯಾವುದೇ ಸಂಕೀರ್ಣ ವಿಷಯಗಳ ಕುರಿತು ಶಿಕ್ಷಕರು ಮತ್ತು ವಿಷಯ ತಜ್ಞರ ನ್ನೊಳಗೊಂಡ ಸಮಿತಿ ರಚಿಸಿ ಅವರಿಂದ ವರದಿ ಪಡೆದು 15 ದಿನಗಳಲ್ಲಿ ವರದಿ ಸಲ್ಲಿಸಬೇಕೆಂದೂ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ. ವರದಿ ಪಡೆದ ನಂತರ ವರದಿಯಲ್ಲಿ ಅಂತಹ ಪಠ್ಯಭಾಗಗಳಿದ್ದರೆ ಅದರ ಪರಾಮರ್ಶೆಗೆ ತಜ್ಞ ಸಮಿತಿ ನೇಮಕ ಮಾಡಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.

error: Content is protected !!