ಬಾಬ್ರಿ ಮಸೀದಿಗೆ ಬದಲೀ ಮಸೀದಿ

December 18, 2020

ಅಯೋಧ್ಯೆ ಡಿ.18 : ಬಾಬ್ರಿ ಮಸೀದಿಗೆ ಬದಲಿಯಾಗಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ನೀಲನಕ್ಷೆ ಸಿದ್ಧವಾಗುತ್ತಿದ್ದು, ಇದೇ ಶನಿವಾರ ಅನಾವರಣಗೊಳ್ಳಲಿದೆ. ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಮುಂದಿನ ತಿಂಗಳು ಜನವರಿಯ ಗಣರಾಜ್ಯೋತ್ಸವ ದಿನ ನೆರವೇರಲಿದೆ ಎಂದು ಮಸೀದಿ ನಿರ್ಮಾಣದ ಟ್ರಸ್ಟ್ ತಿಳಿಸಿದೆ.
ಬಾಬ್ರಿ ಮಸೀದಿಗೆ ಬದಲಾಗಿ ನಿರ್ಮಿಸಲಿರುವ ಮಸೀದಿಗೆ ಅಯೋಧ್ಯೆಯಲ್ಲಿ 5 ಎಕರೆ ಜಮೀನನ್ನು ಮೀಸಲಿಡಲಾಗಿದ್ದು, 7 ದಶಕಗಳ ಹಿಂದೆ ಜಾರಿಗೆ ಬಂದ ಭಾರತದ ಸಂವಿಧಾನದ ದಿನವೇ ಶಂಕುಸ್ಥಾಪನೆ ನೆರವೇರಲಿದೆ. ನಮ್ಮ ಸಂವಿಧಾನ ಬಹುತ್ವವನ್ನು ಆಧಾರವಾಗಿಟ್ಟುಕೊಂಡಿದೆ, ಹೀಗಾಗಿ ಅದೇ ದಿನ ಶಂಕುಸ್ಥಾಪನೆ ನೆರವೇರಲಿದೆ ಎಂದು ಇಂಡೊ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಕಾರ್ಯದರ್ಶಿ ಅತರ್ ಹುಸೇನ್ ತಿಳಿಸಿದ್ದಾರೆ.
ಬಾಬ್ರಿ ಮಸೀದಿಗೆ ಬದಲಾಗಿ ನಿರ್ಮಾಣಗೊಳ್ಳಲಿರುವ ಮಸೀದಿಗೆ 6 ತಿಂಗಳ ಹಿಂದೆ ಸುನ್ನಿ ವಕ್ಪ್ ಬೋರ್ಡ್ ಐಐಸಿಎಫ್ ಸ್ಥಾಪಿಸಲಾಗಿತ್ತು.
ಮಸೀದಿ ಸಂಕೀರ್ಣ ನಿರ್ಮಾಣಕ್ಕೆ ನೀಲನಕ್ಷೆ ಸಿದ್ದವಾಗಿದ್ದು ಅದರಲ್ಲಿ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡುಗೆಮನೆ, ಲೈಬ್ರೆರಿ ಇರುತ್ತದೆ, ಅದನ್ನು ಐಐಸಿಎಫ್ ಇದೇ 19ರಂದು ಅನಾವರಣಗೊಳಿಸಲಿದೆ. ಮಸೀದಿಯೊಳಗೆ ಒಂದು ಬಾರಿಗೆ 2 ಸಾವಿರ ಮಂದಿ ಸೇರುವ ಸಾಮಥ್ರ್ಯವಿರುತ್ತದೆ, ದುಂಡಗಿನ ಆಕಾರದಲ್ಲಿ ಮಸೀದಿಯ ರಚನೆಯಿರುತ್ತದೆ ಎಂದು ಮುಖ್ಯ ವಾಸ್ತುಶಿಲ್ಪಿ ಪೆÇ್ರ.ಎಸ್ ಎಂ ಅಖ್ತರ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

error: Content is protected !!