ಭಾರತ- ಬಾಂಗ್ಲಾ ಒಪ್ಪಂದಗಳಿಗೆ ಸಹಿ

December 18, 2020

ನವದೆಹಲಿ ಡಿ.18 : ಭಾರತ-ಬಾಂಗ್ಲಾದೇಶ ವರ್ಚುವಲ್ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು, 1965ರಲ್ಲಿ ಸ್ಥಗಿತಗೊಂಡಿದ್ದ ರೈಲು ಸಂಪರ್ಕ ಪುನಶ್ಚೇತನ ಸೇರಿದಂತೆ ಏಳು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಹೌದು.. ಬಾಂಗ್ಲಾ ವಿಮೋಚನೆಯ 49ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ ಬೆನ್ನಲ್ಲೇ ಭಾರತ ಮತ್ತು ಬಾಂಗ್ಲಾದೇಶ ವರ್ಚುವಲ್ ಶೃಂಗಸಭೆ ನಡೆದಿದ್ದು, ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪಾಲ್ಗೊಂಡಿದ್ದರು. ಈ ಮಹತ್ವದ ಸಭೆಯಲ್ಲಿ ಉಭಯ ದೇಶಗಳು 1965ರಲ್ಲಿ ಸ್ಥಗಿತಗೊಂಡಿದ್ದ ಚಿಲಿಹತಿ?ಹಲ್ದಿಬಾರಿ ರೈಲು ಸಂಪರ್ಕದ ಪುನಾರಂಭ ಅಥವಾ ಪುನಶ್ಚೇತನ ಸೇರಿದಂತೆ ಏಳು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿವೆ. ಚಿಲಿಹತಿ?ಹಲ್ದಿಬಾರಿ ರೈಲು ಸಂಪರ್ಕದಲ್ಲಿ ಆರಂಭಿಕ ಹಂತದಲ್ಲಿ ಸರಕು ಸಾಗಣೆ ರೈಲುಗಳು ಸಂಚಾರ ನಡೆಸಲಿದ್ದು, ಪೂರ್ಣ ಪ್ರಮಾಣದಲ್ಲಿ ರೈಲು ಹಳಿ ಕಾಮಗಾರಿ ಮುಕ್ತಾಯಗೊಂಡ ಬಳಿಕ ಪ್ಯಾಸೆಂಜರ್ ರೈಲು ಆರಂಭಿಸುವ ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ.

error: Content is protected !!