ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳದಿದ್ದರೆ ಕಾನೂನು ಕ್ರಮ : ಮಡಿಕೇರಿ ನಗರಸಭಾ ಪೌರಾಯುಕ್ತರ ಎಚ್ಚರಿಕೆ

December 18, 2020

ಮಡಿಕೇರಿ ಡಿ.18 : ನಗರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಗುಣಮಟ್ಟ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳದಿದ್ದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆಯ ಪೌರಾಯುಕ್ತ ರಾಮದಾಸ್ ತಿಳಿಸಿದ್ದಾರೆ.
ವಿವಿಧ ಕಾಮಗಾರಿಗಳ ಬಗ್ಗೆ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆ ಸುಬ್ರಹ್ಮಣ್ಯ ನಗರ, ಐಟಿಐ ಕಾಲೇಜು ಹಿಂಭಾಗ, ವಿದ್ಯಾನಗರ, ಟಿ.ಜಾನ್ ಬಡಾವಣೆಯ ರಸ್ತೆ ಕಾಮಗಾರಿ, ಸಾಯಿ ರಸ್ತೆ, ಇಂದಿರಾ ಕ್ಯಾಂಟಿನ್ ಮುಂಭಾಗ, ಎಸ್.ಪಿ.ಬಂಗಲೆ ಬಳಿ ಹಾಗೂ ಖಾಸಗಿ ಹಳೇ ಬಸ್ ನಿಲ್ದಾಣ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿಗಳನ್ನು ಪೌರಾಯುಕ್ತರು ಪರಿಶೀಲಿಸಿದರು.
ಚರಂಡಿ ಕಾಮಗಾರಿ, ತಡೆಗೋಡೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟವರಿಗೆ ಎಸ್.ವಿ.ರಾಮದಾಸ್ ಅವರು ಸೂಚಿಸಿದರು.
ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮತ್ತಿತರ ಕುಂದುಕೊರತೆ ಇದ್ದಲ್ಲಿ ನಗರಸಭೆಗೆ ಮಾಹಿತಿ ನೀಡಬಹುದಾಗಿದೆ ಎಂದು ಪೌರಾಯುಕ್ತರು ಕೋರಿದರು.
ನಗರಸಭೆ ವ್ಯಾಪ್ತಿಯ ಉದ್ಯಾನವನಗಳ ಅಭಿವೃದ್ಧಿ ಜೊತೆಗೆ ಪರಿಸರ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್.ವಿ.ರಾಮದಾಸ್ ತಿಳಿಸಿದರು.

error: Content is protected !!