ಚುನಾವಣೆ ಬಹಿಷ್ಕಾರ ನಿರ್ಧಾರದಿಂದ ಹಿಂದೆ ಸರಿದ ಮುಳ್ಳುಸೋಗೆ ನಿವಾಸಿಗಳು

18/12/2020

ಮಡಿಕೇರಿ ಡಿ.18 : ಗ್ರಾಮ ಪಂಚಾಯ್ತಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದ ಮುಳ್ಳುಸೋಗೆ ಬಡಾವಣೆ ನಾಗರಿಕರನ್ನು ಮನವೊಲಿಸುವಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಯಶಸ್ವಿಯಾಗಿದ್ದಾರೆ.
ಗ್ರಾಮ ಪಂಚಾಯತಿ ಒಂದನೇ ವಾರ್ಡ್‍ನಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ ಎಂದು ಆರೋಪಿಸಿ ಬಡಾವಣೆ ನಿವಾಸಿಗಳು ಪ್ರತಿಭಟನೆ ನಡೆಸಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದರು. ಬಡಾವಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ರಂಜನ್, ಚುನಾವಣೆ ಮುಗಿದ ನಂತರ ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರವನ್ನು ಕೈಬಿಟ್ಟಿದ್ದಾರೆ.