ಕೊಡಗಿನಲ್ಲಿ ಕೋವಿಡ್ : 5408 ಮಂದಿ ಗುಣಮುಖ

December 19, 2020

ಮಡಿಕೇರಿ ಡಿ. 19 : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ 14 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
9 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 5 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ ಈ ಪೈಕಿ 7 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5623 ಆಗಿದ್ದು, 5408 ಮಂದಿ ಗುಣಮುಖರಾಗಿದ್ದಾರೆ. 140
ಸಕ್ರಿಯ ಪ್ರಕರಣಗಳಿದ್ದು, 75 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 68 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!