ಉದ್ಯೋಗಿನಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

19/12/2020

ಮಡಿಕೇರಿ ಡಿ.19 : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಬೆಂಗಳೂರು ಇವರ ವತಿಯಿಂದ 2020-21ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ಅರ್ಹ ಮಹಿಳೆಯರಿಗೆ ಬ್ಯಾಂಕ್ ಸಾಲ ಹಾಗೂ ನಿಗಮದ ಸಹಾಯಧನದೊಂದಿಗೆ ಸೌಲಭ್ಯ ನೀಡಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ (2020-21) ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ಜಿಲ್ಲೆಗೆ ಪ.ಜಾ-2, ಪ.ಪಂ-10 ಗುರಿಗಳನ್ನು ನಿಗಧಿಪಡಿಸಲಾಗಿದೆ. ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ, ಹಾಗೂ ಕೃಷಿಯೇತರ ಚಟುವಟಿಕೆಗಳ (ಹಂದಿ ಸಾಕಾಣಿಕೆ, ಆಡು ಸಾಕಾಣಿಕೆ, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿಪಾರ್ಲರ್, ಟೈಲರಿಂಗ್, ವ್ಯಾಪಾರ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು 18 ರಿಂದ 55 ವರ್ಷ ವಯೋಮಿತಿಗೊಳಪಟ್ಟು ಬಡತನ ರೇಖೆಯ ಒಳಪಡುವ ಪಡಿತರ ಚೀಟಿ ಹೊಂದಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಅವಕಾಶವಿದ್ದು, 18 ರಿಂದ 55 ವರ್ಷದೊಳಗಿನ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.
ಪರಿಶಿಷ್ಟ ಜಾತಿ/ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ ರೂ.1 ಲಕ್ಷ ದಿಂದ ರೂ.3 ಲಕ್ಷ ಹಾಗೂ ಶೇ.50 ಸಹಾಯಧನ ನೀಡಲಾಗುವುದು ಮತ್ತು ಕುಟುಂಬದ ವಾರ್ಷಿಕ ಆದಾಯ ರೂ.2 ಲಕ್ಷಕ್ಕೆ ಮೀರಬಾರದು. ಜಾತಿ ಪ್ರಮಾಣ ಪತ್ರ, ಆದಾಯ ದೃಡೀಕರಣ ಪತ್ರ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಪೋಟೋ ಸಲ್ಲಿಸಬೇಕು.
ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಇಲ್ಲಿ ಈ ಯೋಜನೆಯ ಅರ್ಜಿಗಳು ಲಭ್ಯವಿದ್ದು, ಅರ್ಹ ಮಹಿಳೆಯರು ಈ ಕಚೇರಿಗಳಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಡಿಸೆಂಬರ್, 28 ರೊಳಗೆ ಸಲ್ಲಿಸಬಹುದು. ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ಸಭೆ ನಡೆಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು (ಪ.ಜಾ ಮತ್ತು ಪ.ಪಂ)ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಆಸಕ್ತಿ ಇರುವ ಮಹಿಳೆಯರು ಜಿಲ್ಲಾ ಕಚೇರಿ:- ಜಿಲ್ಲಾ ವ್ಯವಸ್ಥಾಪಕರ ಕಚೇರಿ/ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ, ಮಡಿಕೇರಿ ದೂರವಾಣಿ ಸಂಖ್ಯೆ 7996368687 ದೂರವಾಣಿ ಸಂಖ್ಯೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.