ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

December 19, 2020

ಮಡಿಕೇರಿ ಡಿ.19 : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ಮತ್ತು 9ನೇ ತರಗತಿಗಳನ್ನು 2021-22 ನೇ ಸಾಲಿನ ಶೈಕ್ಷಣಿಕ ಸಾಲಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು. ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ 2020-21 ನೇ ಸಾಲಿನಲ್ಲಿ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಸಲು ಡಿಸೆಂಬರ್, 29 ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ ವೆಬ್‍ಸೈಟ್ http://cbseitms.in/nvsregn/index.aspx ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. 9 ನೇ ತರಗತಿ ಪ್ರವೇಶಕ್ಕೆ 2021ರ ಫೆಬ್ರವರಿ, 13 ರಂದು ಮತ್ತು 6ನೇ ತರಗತಿ ಪ್ರವೇಶಕ್ಕೆ 2021 ರ ಏಪ್ರಿಲ್, 10 ರಂದು ಪರೀಕ್ಷೆ ನಡೆಯಲಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಿ.ಎಂ.ಐಸಾಕ್ ಅವರು ತಿಳಿಸಿದ್ದಾರೆ.

error: Content is protected !!