ಕೊಡಗು ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀಸುಬ್ರಹ್ಮಣ್ಯ ಷಷ್ಠಿ

December 20, 2020

ಮಡಿಕೇರಿ ಡಿ.20 : ಕೊಡಗು ಜಿಲ್ಲೆಯಾದ್ಯಂತ ವಿವಿಧ ದೇವಾಲಯಗಳಲ್ಲಿ ಶ್ರೀಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ಸುಬ್ರಹ್ಮಣ್ಯನ ಆರಾಧನೆ ನಡೆಯಿತು. ಅಭಿಷೇಕ, ಹೂವಿನ ಅಲಂಕಾರ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಷಷ್ಠಿ ನೆರವೇರಿತು. ಪ್ರತಿವರ್ಷ ಸಾವಿರಾರು ಭಕ್ತರಿಗೆ ಅನ್ನದಾನದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಅನ್ನ ಸಂತರ್ಪಣೆ ಇರಲಿಲ್ಲ.
ನಗರದ ಶ್ರೀಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಸುಬ್ರಹ್ಮಣ್ಯ ಗುಡಿಯಲ್ಲೂ ವಿಶೇಷ ಪೂಜೆ ನಡೆಯಿತು. ಶ್ರೀಮುತ್ತಪ್ಪನ್ ಹಾಗೂ ಶ್ರೀಸುಬ್ರಮಣ್ಯ ದೇವರ ಆರಧಾನೆಯೊಂದಿಗೆ ಬಲಿ ಪೂಜೆ, ಕ್ಷೀರಾಭಿಷೇಕ, ಪುಷ್ಪಾರ್ಚನೆ ಸೇರಿದಂತೆ ವಿವಿಧ ಸೇವೆಗಳು ಜರುಗಿದವು. ನೂರಾರು ಭಕ್ತರು ಷಷ್ಠಿ ಪೂಜೆಗೆ ಸಾಕ್ಷಿಯಾದರು.
ಅಶ್ವಥನಕಟ್ಟೆಯಲ್ಲೂ ನಾಗರ ಕಲ್ಲಿಗೆ ಭಕ್ತರು ಹಾಲೆರೆದು ವಿಶೇಷ ಪೂಜೆ ಸಲ್ಲಿಸಿದರು. ಕೂಡಿಗೆಯ ಶ್ರೀಸುಬ್ರಹ್ಮಣ್ಯ ದೇವಾಲಯ ಸೇರಿದಂತೆ ಸೋಮವಾರಪೇಟೆ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪದ ದೇವಾಯಗಳಲ್ಲೂ ಸುಬ್ರಹ್ಮಣ್ಯನ ಆರಾಧನೆ ನಡೆಯಿತು. ಕೋವಿಡ್ ಮಾರ್ಗಸೂಚಿ ಹಿನ್ನೆಲೆ ಭಕ್ತರ ಸಂಖ್ಯೆ ವಿರಳವಾಗಿತ್ತು.

error: Content is protected !!