ಜನವರಿಯಲ್ಲಿ ಕತ್ತಲೆಕಾಡು ಚಾಂಪಿಯನ್ಸ್ ಲೀಗ್

December 20, 2020

ಮಡಿಕೇರಿ ಡಿ.20 : ಕತ್ತಲೆಕಾಡು ಚಾಂಪಿಯನ್ಸ್ ಲೀಗ್ ಪ್ರಥಮ ವರ್ಷದ ಕ್ರಿಕೆಟ್ ಪಂದ್ಯಾವಳಿಯನ್ನು ಜನವರಿ 8ರಿಂದ 10ರವರೆಗೆ ಆಯೋಜಿಸಲಾಗಿದೆ ಎಂದು ಕೆಸಿಎಲ್ ಪಂದ್ಯಾವಳಿ ಸಮಿತಿ ತಿಳಿಸಿದೆ.
ಗ್ರಾಮದ ಯುವಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮೊದಲ ಬಾರಿಗೆ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ. ಪಂದ್ಯಾವಳಿಯಲ್ಲಿ ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿ ಮತ್ತು ಇಬ್ನಿವಳವಾಡಿ, ಹುಲಿತಾಳ ಗ್ರಾಮದ ಆಟಗಾರರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಒಟ್ಟು ಒಂಭತ್ತು ಫ್ರಾಂಚೈಸಿ ತಂಡಗಳು ಪಾಲ್ಗೊಳ್ಳುತ್ತಿರುವುದಾಗಿ ಪಂದ್ಯಾವಳಿ ಆಯೋಜನಾ ಸಮಿತಿ ಅಧ್ಯಕ್ಷ ಬಿ.ಎನ್. ರಾಜೇಶ್ ರೈ ಹಾಗೂ ಕಾರ್ಯದರ್ಶಿ ಮುಸ್ತಫಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಆಟಗಾರರಿಂದ ಅರ್ಜಿ ಸ್ವೀಕೃತವಾಗಿದೆ. ಎಲ್ಲಾ ಆಟಗಾರರನ್ನು ಹರಾಜು ಪ್ರಕ್ರಿಯೆ ಮೂಲಕ ತಂಡಗಳು ಪಡೆದುಕೊಳ್ಳಲಿವೆ. ವಿಜೇತ ತಂಡಕ್ಕೆ 44,444, ರನ್ನರಪ್ ತಂಡಕ್ಕೆ 22,222, ತೃತೀಯ ಸ್ಥಾನ ಪಡೆದ ತಂಡಕ್ಕೆ 11,111 ರೂ. ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು. ಪ್ರತಿ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ ಆಟಗಾರನಿಗೆ ಪಂದ್ಯ ಪುರುಷೋತ್ತಮ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಗುವುದೆಂದು ಮಾಹಿತಿ ನೀಡಿದ್ದಾರೆ.

error: Content is protected !!