ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 5653

21/12/2020

ಮಡಿಕೇರಿ ಡಿ. 21 : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 17 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
13 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 4 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ ಈ ಪೈಕಿ 6 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5653 ಆಗಿದ್ದು, 5443 ಮಂದಿ ಗುಣಮುಖರಾಗಿದ್ದಾರೆ. 135
ಸಕ್ರಿಯ ಪ್ರಕರಣಗಳಿದ್ದು, 75 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 74 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.