ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾಗಲ್ಲ

December 21, 2020

ಬೆಂಗಳೂರು ಡಿ.21 : ಜಾತ್ಯತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ ಯಾವುದೇ ಜೆ.ಡಿ.ಎಸ್. ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆ.ಡಿ.ಎಸ್. ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲದ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ, ಕೇವಲ ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನಃ ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಟವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ ಎಂದಿದ್ದಾರೆ.

error: Content is protected !!