ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ ರವಿಕುಶಾಲಪ್ಪ

21/12/2020

ಮಡಿಕೇರಿ ಡಿ.21 : ಕೊಡವರು ಗೋಮಾಂಸ ಸೇವಿಸುತ್ತಾರೆ ಎಂದು ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಅವರು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಿದ್ದರಾಮಯ್ಯ ಅವರು ಕೊಡವರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿರುವುದಲ್ಲದೆ ಕೋಮು ಗಲಭೆ ಸೃಷ್ಟಿಸುವುದಕ್ಕಾಗಿ ಉದ್ದೇಶಪೂರ್ವಕವಾಗಿ ಕೊಡವರ ವಿರುದ್ಧ ಸುಳ್ಳು ಭಾಷಣ ಮಾಡಿ ಪ್ರಚೋದನೆ ನೀಡಿದ್ದಾರೆ. ಅಲ್ಲದೆ ಹಿಂದೂ ಹಾಗೂ ಮುಸಲ್ಮಾನರ ನಡುವೆ ಅಶಾಂತಿ ಮೂಡಿಸಲು ಯತ್ನಿಸಿದ್ದಾರೆ ಎಂದು ರವಿಕುಶಾಲಪ್ಪ ದೂರಿನಲ್ಲಿ ತಿಳಿಸಿದ್ದಾರೆ.