ಡಿ. 24 ರಂದು ಮಡಿಕೇರಿಯಲ್ಲಿ ಸ್ಕ್ವಾ.ಲೀ ಅಜ್ಜಮಾಡ ದೇವಯ್ಯ ಜನ್ಮದಿನಾಚರಣೆ

ಮಡಿಕೇರಿ ಡಿ. 22 : ಸ್ಕ್ವಾ.ಲೀ ಅಜ್ಜಮಾಡ ದೇವಯ್ಯ ಅವರ 88ನೇ ವರ್ಷದ ಜನ್ಮದಿನಾಚರಣೆಯು ಡಿ. 24 ರಂದು ಕೊಡವ ಮಕ್ಕಡ ಕೂಟ, ಅಜ್ಜಮಾಡ ಕುಟುಂಬ ಹಾಗೂ ಸ್ಕ್ವಾ.ಲೀ. ಅಜ್ಜಮಾಡ ಬಿ. ದೇವಯ್ಯ ಟ್ರಸ್ಟ್ನ ಜಂಟಿ ಆಶ್ರಯದಲ್ಲಿ ನಡೆಯಲಿದೆ.
ನಗರದ ಸ್ಕ್ವಾ.ಲೀ.ಅಜ್ಜಮಾಡದೇವಯ್ಯ ವೃತ್ತದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಏರ್ಮಾರ್ಷಲ್ ಕೊಡಂದೆರ ನಂದಾಕಾರ್ಯಪ್ಪ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂಡೆಪಂಡ ಅಪ್ಪಚ್ಚುರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಮಂಡೆಪಂಡ ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾಅಚ್ಚಯ್ಯ, ಮಾಜಿ ಸಚಿವ ಮೇರಿಯಂಡ ಸಿ. ನಾಣಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿಜಾಯ್, ಜಿಲ್ಲಾ ಪೆÇೀಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರಾ, ಪಾಲ್ಗೊಳ್ಳಲಿದ್ದಾರೆ.
ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಅಜ್ಜಮಾಡ ಕುಟುಂಬದ ಅಧ್ಯಕ್ಷ ಅಜ್ಜಮಾಡ ಲವಕುಶಾಲಪ್ಪ, ಸ್ಕ್ವಾ.ಲೀ.ಅಜ್ಜಮಾಡ ದೇವಯ್ಯ ಟ್ರಸ್ಟ್ನ ಅಧ್ಯಕ್ಷ ಅಜ್ಜಮಾಡ ಕಟ್ಟಿಮಂದಯ್ಯ, ಅಜ್ಜಮಾಡ ಕುಟುಂಬದ ಕಾರ್ಯದರ್ಶಿ ಅಜ್ಜಮಾಡ ಬೋಪಣ್ಣ, ಖಜಾಂಜಿ ಅಜ್ಜಮಾಡ ಚಂಗಪ್ಪ, ಕೊಡಗು ಪ್ರೆಸ್ಕ್ಲಬ್ನ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಮಡಿಕೇರಿ ನಗರಸಭೆಯ ಆಯುಕ್ತ ರಾಮ್ದಾಸ್, ಫೀಲ್ಡ್ಮಾರ್ಷಲ್ ಹಾಗೂ ಜನರಲ್ ಫೆÇೀರಂನ ಅಧ್ಯಕ್ಷ ಕರ್ನಲ್ ಕಂಡ್ರತಂಡ ಸುಬ್ಬಯ್ಯ ಹಾಗೂ ಅಜ್ಜಮಾಡ ಕುಟುಂಬಸ್ಥರು, ನಿವೃತ್ತ ಸೇನಾನಿಗಳು ಸೇರಿದಂತೆ ಸ್ಕ್ವಾ.ಲೀ. ಅಜ್ಜ ಮಾಡ ದೇವಯ್ಯನವರ ಅಭಿಮಾನಿ ಬಳಗ ಭಾಗವಹಿಸಲಿದ್ದಾರೆ.
ಐದುವರೆ ದಶಕದ ಹಿಂದೆ(1965) ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರು ವಿಮಾನವನ್ನು ಹೊಡೆದರುಳಿಸಿ ಬಲಿದಾನಗೈದ ಕೊಡಗಿನ ಅಮರಯೋಧ ಕೊಡಗಿನ ವೀರಸೇನಾ ಪರಂಪರೆಯ ಇತಿಹಾಸದಲ್ಲಿ ಎರಡನೆಯ ಅತ್ಯುನ್ನತ ಶೌರ್ಯಪ್ರಶಸ್ತಿಯಾದ ಮಹಾವೀರ ಚಕ್ರ ಪ್ರಶಸ್ತಿಯನ್ನು ಮರಣೋತ್ತರವಾಗಿ ಪಡೆದ ವೀರಯೋಧ ಸ್ಕ್ವಾ. ಲೀ. ಅಜ್ಜಮಾಡ ದೇವಯ್ಯ ಅವರ ಪ್ರತಿಮೆಯನ್ನು 2020 ಸೆಪ್ಟಂಬರ್ 7 ರಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ನೇತೃತ್ವದಲ್ಲಿ ಅಜ್ಜಮಾಡ ದೇವಯ್ಯ ಮೆಮೋರಿಯಲ್ ಟ್ರಸ್ಟ್ ಹಾಗೂ ಅಜ್ಜಮಾಡ ಕುಟುಂಬದ ಜಂಟಿ ಆಶ್ರಯದಲ್ಲಿ ಮಡಿಕೇರಿಯ ಸ್ಕ್ವಾ.ಲೀ.ಅಜ್ಜಮಾಡ ದೇವಯ್ಯವೃತ್ತದಲ್ಲಿ ಪ್ರತಿಷ್ಠಾಪಿಸಿ ಲೋಕಾರ್ಪಣೆ ಮಾಡಲಾಯಿತು.
