ಕಾಫಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

22/12/2020

ಮಡಿಕೇರಿ ಡಿ.22(ಕರ್ನಾಟಕ ವಾರ್ತೆ):-ಕಾಫಿ ಮಂಡಳಿಯಿಂದ ಕಾಫಿ ತೋಟದ/ ಕ್ಯೂರಿಂಗ್ ಕಾರ್ಮಿಕರ, ಮಕ್ಕಳಿಗೆ 2019-20 ರಲ್ಲಿ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿ ಪ್ರಸಕ್ತ 2020-21 ನೇ ಸಾಲಿನಲ್ಲಿ ಪ್ರಥಮ ಪಿಯುಸಿ, ಪಾಲಿಟೆಕ್ನಿಕ್, ವೃತ್ತಿಪರ ಶಿಕ್ಷಣಗಳಲ್ಲಿ ಓದುತ್ತಿರುವ, ದಾಖಲಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆಯಲಿದೆ.
2019-20 ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದ ಎಂಬಿಬಿಎಸ್, ಬಿಇ, ಕೃಷಿ, ಪಾರ್ಮಸಿ, ನರ್ಸಿಂಗ್ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ, ದಾಖಲಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಅಧಿಕ ಅಂಕ ಪಡೆದ ಆಧಾರದ ಮೇಲೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಹತ್ತಿರದ ಕಾಫಿ ಮಂಡಳಿ ಕಚೇರಿಗಳಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಯಾಯ ಕಾಲೇಜುಗಳಿಂದ ದೃಢೀಕರಿಸಿ ಹತ್ತಿರದ ಕಾಫಿ ಮಂಡಳಿ ಕಚೇರಿಗಳಿಗೆ ಖುದ್ದಾಗಿ ಸಲ್ಲಿಸಲು ಕೋರಿದೆ. ಅರ್ಜಿ ಸಲ್ಲಿಸಲು 2021 ರ ಜನವರಿ, 18 ಕೊನೆಯ ದಿನವಾಗಿದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಹತ್ತಿರದ ಕಾಫಿ ಮಂಡಳಿಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಕಾಫಿ ಮಂಡಳಿಯ ಉಪ ನಿರ್ದೇಶಕರು ತಿಳಿಸಿದ್ದಾರೆ.