ಕೊಡಗಿನಲ್ಲಿ ಕೋವಿಡ್ : ಸೋಂಕಿತರ ಸಂಖ್ಯೆ 5684

December 23, 2020

ಮಡಿಕೇರಿ ಡಿ. 23 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 12 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
8 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 4 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5684 ಆಗಿದ್ದು, 5480 ಮಂದಿ ಗುಣಮುಖರಾಗಿದ್ದಾರೆ. 129
ಸಕ್ರಿಯ ಪ್ರಕರಣಗಳಿದ್ದು, 75 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 82 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!