ಕೋವಿಡ್ ಸೋಂಕಿತರಿಂದ ಮತ ಚಲಾವಣೆ

23/12/2020

ಮಡಿಕೇರಿ ಡಿ. 23 : ಮೊದಲ ಹಂತದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಎಲ್ಲಾ ಮತಗಟ್ಟೆಗಳಲ್ಲಿ ಥರ್ಮೋ ಸ್ಕ್ಯಾನರ್ ಮೂಲಕ ಮತದಾರರನ್ನು ತಪಾಸಣೆ ಮಾಡಿ ಮತಗಟ್ಟೆಗೆ ಕಳುಹಿಸುತ್ತಿದ್ದ ದೃಶ್ಯ ಕಂಡುಬಂದಿತು. ಜತೆಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು, ಹಾಗೆಯೇ 4 ರಿಂದ 5 ಗಂಟೆ ಅವಧಿಯಲ್ಲಿ ಕೋವಿಡ್-19 ಶಂಕಿತರಿಗೆ ಮತಹಕ್ಕು ಚಲಾಯಿಸಲು ಅವಕಾಶ ನೀಡಲಾಗಿತ್ತು. ಮಡಿಕೇರಿ ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲಿ ತಲಾ 12 ಮಂದಿಯಂತೆ ಒಟ್ಟು 24 ಕೋವಿಡ್ ಸೋಂಕಿತರು ಮತ ಚಲಾಯಿಸಿದರು.