ವಿಕಲಚೇತನರ ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

23/12/2020

ಮಡಿಕೇರಿ ಡಿ.23 : ನ್ಯಾಷನಲ್ ಇ ಸ್ಕಾಲರ್‍ಷಿಪ್ ಪೋರ್ಟಲ್ ಮೂಲಕ ವಿಕಲಚೇತನರ ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ(2020-21) ಸಾಲಿನ ಕೇಂದ್ರ ಸರ್ಕಾರದ ನ್ಯಾಷನಲ್ ಇ ಸ್ಕಾಲರ್‍ಶಿಪ್ ಯೋಜನೆಯಡಿಯಲ್ಲಿ ಪ್ರಿ ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್, 31 ಕೊನೆಯ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ಸರ್ಕಾರಿ / ಶೈಕ್ಷಣಿಕ ಸಂಸ್ಥೆಗಳ ವಿಕಲಚೇತನ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರಿಂದ ಅಗತ್ಯ ದಾಖಲೆಗಳೊಂದಿಗೆ ಆನ್‍ಲೈನ್ ವೆಬ್‍ಸೈಟ್ http://scholarship.gov.in ಮೂಲಕ ಅರ್ಜಿ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆಯ ಕಚೇರಿ ದೂರವಾಣಿ ಸಂಖ್ಯೆ.08272-295829 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.