ವೈದ್ಯರ ವಿಶೇಷ ಭತ್ಯೆ ಪರಿಷ್ಕರಣೆ

December 23, 2020

ಬೆಂಗಳೂರು ಡಿ.23 : ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವೃಂದಗಳ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವೈದ್ಯರಿಗೆ ತ್ವರಿತವಾಗಿ ಸ್ಪಂದಿಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪೆÇ್ರೀತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ & ದಂತ ಆರೋಗ್ಯಾಧಿಕಾರಿಗಳಿಗೆ 2020 ರ ಸೆ.1 ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿದೆ.
ಈ ಹಿಂದೆ 2015 ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿತ್ತು. 0-6 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಎಸ್/ಬಿಡಿಎಸ್ ವಿದ್ಯಾರ್ಹತೆ ಇರುವವರಿಗೆ ಮಾಸಿಕ 21,000 ರೂ.ನಿಂದ 30,500 ರೂ., ಸ್ನಾತಕೋತ್ತರ ಪದವಿ/ಡಿಪೆÇ್ಲಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 42,600 ರೂ.ನಿಂದ 55,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 50,800 ರೂ.ನಿಂದ 64,500 ರೂ.ಗೆ ಹೆಚ್ಚಿಸಲಾಗಿದೆ.

error: Content is protected !!