ರಾಜ್ಯದಲ್ಲಿ ಇಂದಿನಿಂದ ಜ. 2ರ ವರೆಗೆ ರಾತ್ರಿ ಕರ್ಫ್ಯೂ ಜಾರಿ

December 23, 2020

ಬೆಂಗಳೂರು ಡಿ. 23 : ಬ್ರಿಟನ್ ದೇಶದಿಂದ ಹೊಸ ಸ್ವರೂಪದ ಕೊರೋನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ಕಾರ್ಯಪಡೆ ಹಾಗೂ ತಂತ್ರಿಕಾ ಸಲಹಾ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿ ನಂತರ ಮಾತನಾಡಿದ ಅವರು, ದೇಶದಲ್ಲಿ ರೂಪಾಂತರ ಕೊರೋನಾ ವೈರಸ್ ಹರಡುತ್ತಿರುವ ನಿಟ್ಟಿನಲ್ಲಿ ಇಂದಿನಿಂದ ಜನವರಿ 2ರ ವರೆಗೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾತ್ರಿ 10 ಗಂಟೆಯ ನಂತರ ಜನರು ಮನೆಯಿಂದ ಹೊರಗೆ ಬರುವಂತಿಲ್ಲ. ಅಂಗಡಿ ಮುಂಗಟ್ಟುಗಳು ಬಾಗಿಲು ಬಂದ್ ಮಾಡಬೇಕು. ಅಂತರರಾಜ್ಯ ಜನ ಸಂಚಾರವನ್ನೂ ನಿಷೇಧಿಸಲಾಗಿದೆ. ಆದರೆ, ರಾತ್ರಿಯ ಹೊತ್ತು ಔಷಧ ಅಂಗಡಿ, ಆಸ್ಪತ್ರೆ ಇತ್ಯಾದಿ ಅಗತ್ಯ ಸೇವೆಗಳಿಗೆ ಅವಕಾಶ ಇರುತ್ತದೆ. ಜನವರಿ 1ರಂದು ಶಾಲೆಗಳನ್ನ ಪುನಾರಂಭಿಸುವ ಸರ್ಕಾರದ ನಿರ್ಧಾರವನ್ನು ಈ ವೇಳೆ ಪರಿಷ್ಕರಿಸಲಾಗಿಲ್ಲ. ಇನ್ನೆರಡು ಮೂರು ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುವುದು. ಸದ್ಯಕ್ಕೆ ಶಾಲೆಗಳನ್ನ ಆರಂಭಿಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.

error: Content is protected !!