ಕೊಡಗಿನಲ್ಲಿ ಡಿಜೆ ಡ್ಯಾನ್ಸ್, ವಿಶೇಷ ಪಾರ್ಟಿ ನಿಷೇಧ : ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಡಳಿತ

December 23, 2020

ಮಡಿಕೇರಿ ಡಿ.23 : ಕ್ರಿಸ್‍ಮಸ್ ಹಾಗೂ ಹೊಸ ವರ್ಷ ಆಚರಣೆ ಸಂದರ್ಭ ಸಾರ್ವಜನಿಕರು ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳÀನ್ನು ಪಾಲಿಸಬೇಕು ಮತ್ತು ಜಿಲ್ಲಾಡಳಿತದೊಂದಿಗೆ ಕೈಜೋಡಿಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ.
ಚರ್ಚ್‍ಗಳಲ್ಲಿ ಹೆಚ್ಚು ಜನರು ಸೇರದೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಜ.2 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಅದೇ ತೆರೆನಾದ ಸ್ಥಳ, ಪ್ರದೇಶಗಳಲ್ಲಿ ಹೆಚ್ಚು ಜನರು ಸೇರುವಂತ್ತಿಲ್ಲ. ಡಿಜೆ ಡ್ಯಾನ್ಸ್, ಕಾರ್ಯಕ್ರಗಳನ್ನು, ವಿಶೇಷ ಪಾರ್ಟಿಯನ್ನು ನಿಷೇಧಿಸಲಾಗಿದೆ. ಹೊಸ ವರ್ಷ ಆಚರಣೆ ಸಂದಂರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಲಾಗಿದೆ. ಮುಖ್ಯವಾಗಿ 65 ವರ್ಷದ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದ ಒಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹೆಸರುವಾಸಿ ಪ್ರವಾಸಿತಾಣಗಳಾದ ಮಡಿಕೇರಿಯ ರಾಜಾಸೀಟು ಉದ್ಯಾನವನ, ಅಬ್ಬಿಫಾಲ್ಸ್, ಪುಣ್ಯ ಕ್ಷೇತ್ರಗಳಾದ ಶ್ರೀತಲಕಾವೇರಿ, ಶ್ರೀಓಂಕಾರೇಶ್ವರ ದೇವಾಲಯ ಮೊದಲಾದೆಡೆ ಪ್ರವಾಸಿಗರು ಹಾಗೂ ಭಕ್ತರ ಮೇಲೆ ನಿಗಾ ಇರಿಸಲಾಗಿದೆ.

error: Content is protected !!