ಬ್ರಿಟನ್ ನಿಂದ ಬರುವವರಿಗೆ ಮಾರ್ಗಸೂಚಿ

24/12/2020

ಬೆಂಗಳೂರು ಡಿ.24 : ಬ್ರಿಟನ್ ನಲ್ಲಿ ಹೊಸ ಮಾದರಿಯ ಕೊರೋನಾ ವೈರಸ್ ಪತ್ತೆಯಾಗಿ, ಬ್ರಿಟನ್ ನಿಂದ ಬರುವ ಪ್ರಯಾಣಿಕರಿಗೆ ಕೆಲವು ಮಾರ್ಗಸೂಚಿಗಳನ್ನು ವಿಧಿಸಲಾಗಿದೆ.
ಬ್ರಿಟನ್ ನಿಂದ ಆಗಮಿಸುವ ಎಲ್ಲಾ ಪ್ರಯಾಣಿಕರೂ ಆಗಮಿಸುತ್ತಿದ್ದಂತೆಯೇ ವಿಮಾನ ನಿಲ್ದಾಣದಲ್ಲಿ ಆರ್ ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಬೇಕಿದೆ, ಆರ್ ಟಿ-ಪಿಸಿಆರ್ ನೆಗೆಟೀವ್ ಬಂದರೂ 14 ದಿನಗಳ ಹೋಮ್ ಕ್ವಾರಂಟೈನ್ ನಲ್ಲಿರಬೇಕು ಎಂಬ ನಿಯಮಗಳನ್ನು ವಿಧಿಸಲಾಗಿದೆ.
ಬಿಎಲ್ ಆರ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಈ ಮಾರ್ಗಸೂಚಿಗಳು ಅನ್ವಯವಾಗಲಿದೆ.
ರಾಜ್ಯ ಸರ್ಕಾರ ಹೊರಡಿಸುವ ಸುತ್ತೋಲೆಯ ಪ್ರಕಾರ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಲಂಡನ್ ನಿಂದ ನೇರವಾಗಿ ಅಥವಾ ಲಂಡನ್ ನಿಂದ ಬೇರೆಡೆಗೆ ತೆರಳಿ ಭಾರತಕ್ಕೆ ಬರುವ ಪ್ರಯಾಣಿಕರು ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಆರ್ ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಬೇಕು.