ಮತಾಂತರಗೊಂಡರೆ ತಡೆಯಲು ಸಾಧ್ಯವಿಲ್ಲ

December 24, 2020

ಕೋಲ್ಕತ್ತಾ ಡಿ.24 : ವಯಸ್ಕ ಹೆಣ್ಣು ಮಗಳು ತನ್ನ ಇಚ್ಛೆಯಂತೆ ಮದುವೆಯಾಗಿ ಧರ್ಮ ಮತಾಂತರಗೊಂಡರೆ ಯಾರೂ ಹಸ್ತಕ್ಷೇಪ ಮಾಡಿ ತಡೆಯಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ.
19 ವರ್ಷದ ಯುವತಿ ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದಳು. ನಂತರ ಕೋಲ್ಕತ್ತಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಆಕೆಯ ತಂದೆ, ತಮ್ಮ ಮಗಳ ಮೇಲೆ ಪ್ರಭಾವ ಬೀರಿ ಅನ್ಯ ಧರ್ಮದ ವ್ಯಕ್ತಿ ಮದುವೆಯಾಗಿದ್ದು, ತನ್ನ ಮಗಳ ಹೇಳಿಕೆಯನ್ನು ಮ್ಯಾಜಿಸ್ಟ್ರೇಟರ ಮುಂದೆ ದಾಖಲು ಸಹ ಮಾಡಿಕೊಳ್ಳಲು ಬಿಡಲಿಲ್ಲ ಎಂದು ಆರೋಪಿಸಿದ್ದರು.
ಯುವತಿಯ ತಂದೆ ಸಲ್ಲಿಸಿದ ಎಫ್‍ಐಆರ್ ಪ್ರಕಾರ, ಪೆÇಲೀಸರು ಯುವತಿಯನ್ನು ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದಾಗ ಆಕೆ ತನ್ನ ಇಷ್ಟದ ಪ್ರಕಾರವೇ ಮದುವೆಯಾಗಿರುವುದಾಗಿ ತಿಳಿಸಿದಳು.

error: Content is protected !!