ಡಿ. 26 ರಂದು ಆನ್ಲೈನ್ ಮೂಲಕ ಸಿ.ಐ.ಟಿ. ಹಳೆ ವಿದ್ಯಾರ್ಥಿಗಳ ಒಕ್ಕೂಟ

24/12/2020

ಮಡಿಕೇರಿ ಡಿ. 24 : ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಹಳೆವಿದ್ಯಾರ್ಥಿಗಳ ಸಂಘದ ವತಿಯಿಂದ ಡಿ. 26 ರಂದು ಆನ್ಲೈನ್ ಮೂಲಕ ಹಳೆ ವಿದ್ಯಾರ್ಥಿಗಳ ಒಕ್ಕೂಟವನ್ನು ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಆನ್ಲೈನ್ ಕಾರ್ಯಕ್ರಮವನ್ನು ಸಿ.ಐ.ಟಿ.ಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ Senior Developer, SAP LABS, India. ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕೆ.ಅಪ್ಪಯ್ಯ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಸಿ.ಪಿ.ಬೆಳ್ಳಿಯಪ್ಪ, ಉಪಾಧ್ಯಕ್ಷ ಡಾ.ಎಂ.ಸಿ.ಕಾರ್ಯಪ್ಪ, ಕಾರ್ಯದರ್ಶಿ ಸಿ.ಪಿ.ರಾಕೇಶ್ ಪೂವಯ್ಯ, ಸಿ.ಐ.ಟಿ.ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಬಸವರಾಜ್ ಹಾಗೂ ಸಿ.ಐ.ಟಿ.ಬೋಧಕ, ಬೋಧಕೇತರ ವೃಂದವರು ಪಾಲ್ಗೊಳ್ಳಲ್ಲಿದ್ದಾರೆ.
ಕಾರ್ಯಕ್ರಮದ ನಿರ್ವಹಣೆಯನ್ನು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ|| ಪಿ.ಸಿ. ಕವಿತ, ಸಿ.ಐ.ಟಿ. ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಬೋಧಕ ಕೆ.ಎಂ.ಕೀರ್ತನ್ ನಿರ್ವಹಿಸಲಿದ್ದು, Website : www.citcoorg.edu.in ನಲ್ಲಿ ಸಿ.ಐ.ಟಿ.ಯ ಹಳೆವಿದ್ಯಾರ್ಥಿಗಳು ಪಾಲ್ಗೊಳ್ಳಬಹುದಾಗಿದೆ.