ಅರೆಭಾಷೆ ಕೃತಿಗಳ ಆಹ್ವಾನ

December 24, 2020

ಮಡಿಕೇರಿ ಡಿ.24 : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಕಟಣೆ ಯೋಜನೆಯಡಿ ಪುಸ್ತಕಗಳನ್ನು ಪ್ರಕಟಿಸಲು ಉದ್ದೇಶಿಸಲಾಗಿದೆ. ಆದ್ದರಿಂದ ಲೇಖಕರು ಅರೆಭಾಷೆ ಕಥೆ, ಕವನ, ಲೇಖನ, ವಿಚಾರ ಸಾಹಿತ್ಯ, ಲಲಿತ ಪ್ರಬಂಧ, ಸಂಶೋಧನ ಕೃತಿಗಳು ಇನ್ನಿತರೆ ಬರಹಗಳಿದ್ದಲ್ಲಿ ಹಸ್ತಪ್ರತಿಗಳನ್ನು ಅಕಾಡೆಮಿಗೆ ಸಲ್ಲಿಸುವಂತೆ ರಿಜಿಸ್ಟ್ರಾರ್ ಚಿನ್ನಸ್ವಾಮಿ ಕೋರಿದ್ದಾರೆ.
ಬರಹವು ಕನಿಷ್ಠ 70 ರಿಂದ 80 ಪುಟಗಳಿರಬೇಕು. ತಮ್ಮ ಹಸ್ತಪ್ರತಿಗಳನ್ನು ಸಲ್ಲಿಸಲು 2021 ರ ಜನವರಿ, 20 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ, ರಾಜಸೀಟ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ. ಮೊ.ನಂ 6362522677 ಹಾಗೂ ಚಿಡಿebಚಿseಚಿಛಿಚಿಜemಥಿ@gmಚಿiಟ.ಛಿom. ಸಂರ್ಕಿಸಬಹುದು. ಪುಸ್ತಕಗಳ ಆಯ್ಕೆಯ ಹಕ್ಕು ಅಕಾಡೆಮಿಯದಾಗಿದೆ. ಹಾಗೂ ಎಂದು ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.

error: Content is protected !!