ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ

December 25, 2020

ಬೆಂಗಳೂರು ಡಿ.25 : ಮುಂದಿನ ದಿನಗಳಲ್ಲಿ ಕೊರೋನಾದಂತಹ ವ್ಯಾದಿಗಳು, ಸಮುದಾಯಕ್ಕೆ ಕೇಡು ತರುವಂತಹ ವೈರಾಣುಗಳಿಂದ ಸಮುದಾಯದ ಆರೋಗ್ಯವನ್ನು ಉಳಿಸಿಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದು, ಆರೋಗ್ಯ ಸೇವೆಯಲ್ಲಿ ಇಡೀ ದೇಶದಲ್ಲೇ ಕರ್ನಾಟಕ ಮಾದರಿಯಾಗುವಂತೆ ಹೆಜ್ಜೆ ಇಡುತ್ತಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಜೊತೆ ಚೆರ್ಚೆ ನಡೆಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಕನ್ನಡಿಗನಿಗೂ ಉಚಿತವಾಗಿ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು ಎನ್ನುವುದಾದರೆ ನಮ್ಮ ಸಮುದಾಯದ ಆರೋಗ್ಯ ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಹಾಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯ, ಆರೋಗ್ಯ ಸಿಬ್ಬಂದಿ ಹೊಸದಾಗಿ ನೇಮಕ ಮಾಡುವುದು ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆ ಕೂಲಂಕುಶವಾಗಿ ಪ್ರಾತ್ಯಕ್ಷಿಕೆ ಮೂಲಕ ಮುಖ್ಯಮಂತ್ರಿಗಳಿಗೆ ವಿವರಣೆ ನೀಡಲಾಗಿದೆ ಎಂದರು.

error: Content is protected !!