ಕೊಡಗಿನಲ್ಲಿ ಸಂಭ್ರಮದ ಕ್ರಿಸ್‍ಮಸ್ ಆಚರಣೆ

25/12/2020

ಮಡಿಕೇರಿ ಡಿ.25 : ಕೋವಿಡ್ ಆತಂಕದ ನಡುವೆಯೂ ಕೊಡಗಿನಲ್ಲಿ ಕ್ರಿಸ್‍ಮಸ್ ಸಂಭ್ರಮ ಮನೆ ಮಾಡಿತ್ತು. ಜಿಲ್ಲೆಯಾದ್ಯಂತ ಇರುವ ವಿವಿಧ ಚರ್ಚ್‍ಗಳಲ್ಲಿ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಡಿಕೇರಿ ನಗರದ ಸಂತ ಮೈಕಲರ ಚರ್ಚ್‍ನಲ್ಲಿ ಮಧ್ಯರಾತ್ರಿ ಗೋದಲಿಯಲ್ಲಿ ಬಾಲ ಯೇಸುವನ್ನು ಇಡುವ ಮೂಲಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ಕ್ರೈಸ್ತರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಕೇಕ್ ಹಂಚುವ ಮೂಲಕ ಹಬ್ಬವನ್ನು ಸಂಭ್ರಮಿಸಿದರು.
ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್, ಸುಂಟಿಕೊಪ್ಪದ ಸಂತ ಅಂತೋಣಿ ಚರ್ಚ್ ಸೇರಿದಂತೆ ಜಿಲ್ಲೆಯಾದ್ಯಂತ ಚರ್ಚ್‍ಗಳಲ್ಲಿ ಕ್ರಿಸ್‍ಮಸ್ ಪ್ರಯುಕ್ತ ಕ್ರೈಸ್ತ ಬಾಂಧವರು ಮಾತ್ರವಲ್ಲದ ಇತರ ಧರ್ಮೀಯರು ಕೂಡ ಪ್ರಾರ್ಥನೆ ಸಲ್ಲಿಸಿದರು.