ರಕ್ತದೊತ್ತಡದಲ್ಲಿ ತೀವ್ರ ಏರಿಳಿತ: ಸೂಪರ್​ಸ್ಟಾರ್ ರಜಿನಿಕಾಂತ್ ಆಸ್ಪತ್ರೆಗೆ ದಾಖಲು

December 25, 2020

ಹೈದರಾಬಾದ್ : ರಕ್ತದೊತ್ತಡದಲ್ಲಿ ತೀವ್ರ ಏರಿಳಿತ ಕಾಣಿಸಿಕೊಂಡಿದ್ದರಿಂದ ಸೂಪರ್​ಸ್ಟಾರ್​ ರಜಿನಿಕಾಂತ್ ಅವರು ಶುಕ್ರವಾರ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಜನಿಕಾಂತ್ ಅವರಿಗೆ ಕೋವಿಡ್-19ನ ಯಾವುದೇ ರೋಗ ಲಕ್ಷಣಗಳಿಲ್ಲ. ಅವರ ರಕ್ತದೊತ್ತಡದಲ್ಲಿ ತೀವ್ರ ಏರಿಳಿತವಾಗಿದೆ. ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ತಪಾಸಣೆಯ ಅಗತ್ಯವಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಪೋಲೋ ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.  

error: Content is protected !!