ಸೋಮವಾರಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ

ಮಡಿಕೇರಿ ಡಿ. 25 : ಸೋಮವಾರಪೇಟೆ ಬಿ.ಜೆ.ಪಿ.ವತಿಯಿಂದ ಮಾಜಿ ಪ್ರಧಾನಿ, ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ಅಟಲ್ ಬಿಹಾರಿ ವಾಜಪೇಯಿರಾಷ್ಟ್ರ ಕಂಡ ಅಪರೂಪದ ರಾಜಕಾರಣಿ ಹಾಗೂ ಅಜಾತಶತ್ರು. ಬಿಜೆಪಿ ಪಕ್ಷದ ಏಳಿಗೆಗೆ ಶ್ರಮಿಸಿದ್ದಾರೆ ಎಂದರು.
ರೈತರ ಹಿತಾಸಕ್ತಿ ಹೊಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೈತ ಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ರೈತರ ಏಳಿಗೆಗಾಗಿ ಕೃಷಿ ಮಸೂದೆ ಜಾರಿಗೆ ತರಲಾಗಿದೆ. ಅಲ್ಲದೆ ರೈತರ ಖಾತೆಗಳಿಗೆ ನೇರ ಹಣ ಪಾವತಿಮಾಡಲಿದ್ದಾರೆ ಎಂದರು.
ಈ ಸಂದರ್ಭ ವೇದಿಕೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹೆಚ್.ಕೆ.ಮಾದಪ್ಪ, ಮಾಜಿ ಅಧ್ಯಕ್ಷ ಭಾರತೀಶ್, ತಾಲೂಕು ಅಧ್ಯಕ್ಷ ಮನುಕುಮಾರ್ ರೈ, ಕೃಷಿಮೋರ್ಚಾ ಕಾರ್ಯದರ್ಶಿ ಕುಂದಳ್ಳಿ ದಿನೇಶ್ ಉಪಸ್ಥಿತರಿದ್ದರು.
