ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ 26 ವರ್ಷಗಳ ನಂತರ ಅಷ್ಟಬಂಧ ಬ್ರಹ್ಮಕಲಶೋತ್ಸವ : ಜಿಲ್ಲಾಧಿಕಾರಿ ಭೇಟಿ

December 25, 2020

ಮಡಿಕೇರಿ ಡಿ.25 : ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ 26 ವರ್ಷಗಳ ನಂತರ ಮೊದಲ ಬಾರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ದಿನಾಂಕ: 26-12-2020 ರಿಂದ  31-12-2020 ರ ವರೆಗೆ ನಡೆಯಲಿದೆ.  ಈ ಕಾರ್ಯಕ್ರಮದಲ್ಲಿ ಕೋವಿಡ್ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.     ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು‌ ಇಂದು ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿದರು.  ಪರಿಶೀಲನೆಯ ಸಮಯದಲ್ಲಿ  ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಹಾಗೂ ಸದಸ್ಯರುಗಳು,  ಕಾರ್ಯ ನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಹಾಜರಿದ್ದರು.

error: Content is protected !!