ಗಿರಿಧಾಮಗಳ ರಾಣಿ ಎಂದು ಕರೆಯಲ್ಪಡುವ ಕೆಮ್ಮಣ್ಣುಗುಂಡಿ

December 26, 2020

ಕರ್ನಾಟಕದಲ್ಲಿ ಹಲವಾರು ಸುಂದರವಾದ ತಾಣಗಳಿವೆ. ಅವುಗಳಲ್ಲಿ ಕರ್ನಾಟಕದ ಚಿಕ್ಕಮಗಳೂರಿನಲ್ಲಿರುವ ಕೆಮ್ಮಣ್ಣುಗುಂಡಿಯೂ ಒಂದಾಗಿದೆ. ಕೆಂಪಾದ ಮಣ್ಣು ಹಾಗೂ ಆಳವಾದ ಸುಂದರ ಪ್ರಪಾತಗಳು ಇಲ್ಲಿ ಇರೋದರಿಂದ ಈ ತಾಣಕ್ಕೆ ಕೆಮ್ಮಣ್ಣು ಗುಂಡಿ ಎಂಬ ಹೆಸರು ಬಂದಿದೆ. ಕೆಮ್ಮಣ್ಣು ಗುಂಡಿಯನ್ನು ಗಿರಿಧಾಮಗಳ ರಾಣಿ ಎಂದು ಕರೆಯಲಾಗುತ್ತದೆ.

ಸಮುದ್ರ ಮಟ್ಟದಿಂದ ೧೪೩೪ ಮೀ ಎತ್ತರದಲ್ಲಿರುವ ಈ ಊರು, ಬೆಂಗಳೂರಿನಿಂದ ಸುಮಾರು ೨೫೦ ಕಿ.ಮೀ ದೂರದಲ್ಲಿ ಹಾಗು ಚಿಕ್ಕಮಗಳೂರಿನಿಂದ ೫೫ ಕಿಲೋ ಮೀಟರ್ ದೂರದಲ್ಲಿದೆ.. ಇದು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಬೇಸಿಗೆ ತಾಣವಾಗಿದ್ದರಿಂದ ಇದನ್ನು “ಶ್ರೀ ಕೃಷ್ಣರಾಜೇಂದ್ರ ಗಿರಿಧಾಮ” ಎಂದೂ ಕರೆಯುತ್ತಾರೆ. ಇಲ್ಲಿನ ಸುಂದರ ಉದ್ಯಾನಗಳು, ಹಸಿರು ಪ್ರಕೃತಿ, ನೀರಿನ ಅಬ್ಬಿಗಳು ಮತ್ತು ಪಶ್ಚಿಮ ಘಟ್ಟಗಳ ಮನೋಹರವಾದ ಪರ್ವತಗಳು ಈ ಸ್ಥಳವನ್ನು ಆಕರ್ಷಣೀಯವಾಗಿ ಮಾಡಿವೆ. ಪರ್ವತಾರೋಹಣ ಮೊದಲಾದ ಚಟುವಟಿಕೆಗಳಿಗೆ ಕೆಮ್ಮಣ್ಣುಗುಂಡಿಯ ಸುತ್ತಮುತ್ತಲಿನ ಗಿರಿಬೆಟ್ಟಗಳಲ್ಲಿ ಅವಕಾಶವಿದೆ.

ಕನ್ನಡದ ಹಲವಾರು ಚಿತ್ರಗಳು ಇಲ್ಲಿ ಚಿತ್ರೀಕರಣಗೊಂಡಿವೆ. ಕೆಲವು ಪ್ರಮುಖ ಚಿತ್ರಗಳೆಂದರೆ – ಪ್ರೇಮದ ಕಾಣಿಕೆ, ಆನಂದ್, ಪ್ರೀತಿ ಮಾಡು ತಮಾಷೆ ನೋಡು.

ಕೆಮ್ಮಣ್ಣುಗುಂಡಿಯಲ್ಲಿ ಯಥೇಚ್ಚವಾಗಿ ಕಬ್ಬಿಣದ ಅದಿರು ದೊರಕುತ್ತದೆ. ಭದ್ರಾವತಿಯ ಸರ್.ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಕೆಮ್ಮಣ್ಣುಗುಂಡಿಯಿಂದ ಅದಿರು ಸರಬರಾಜಾಗುತಿತ್ತು.

error: Content is protected !!