ಎರಡನೇ ಹಂತದ ಗ್ರಾ.ಪಂ.ಚುನಾವಣೆ : ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ

26/12/2020

ಮಡಿಕೇರಿ ಡಿ. 26 : ಗ್ರಾ.ಪಂ.ಎರಡನೇ ಹಂತದ ಚುನಾವಣೆ ಸಂಬಂಧ ಇಂದು ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ಮಸ್ಟರಿಂಗ್ ಕಾರ್ಯವು ಸುಸೂತ್ರವಾಗಿ ನಡೆಯಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಇತರರು ಇದ್ದರು.