ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 69

December 27, 2020

ಮಡಿಕೇರಿ ಡಿ.27 : ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 8 ಗಂಟೆ ವೇಳೆಗೆ 12 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5711 ಆಗಿದ್ದು, 5567 ಮಂದಿ ಗುಣಮುಖರಾಗಿದ್ದಾರೆ. 69 ಸಕ್ರಿಯ ಪ್ರಕರಣಗಳಿದ್ದು, 75 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 71 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದ್ದು, ಈ ಪೈಕಿ 3 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 7 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 6 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಈ ಪೈಕಿ 2 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

error: Content is protected !!