ಧೋನಿ ಏಕದಿನ ತಂಡದ ನಾಯಕ
December 28, 2020

ನವದೆಹಲಿ ಡಿ.28 : ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ದಶಕದ ಪುರುಷರ ಏಕದಿನ ತಂಡದ ನಾಯಕನನ್ನಾಗಿ ಆಯ್ಕೆ ಮಾಡಿದೆ.
ಧೋನಿ ನೇತೃತ್ವದ ತಂಡದಲ್ಲಿ ಸ್ಟಾರ್ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಮತ್ತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಇದ್ದಾರೆ. ತಂಡದಲ್ಲಿ ಡೇವಿಡ್ ವಾರ್ನರ್ ಮತ್ತು ರೋಹಿತ್ ರನ್ನು ಆರಂಭಿಕ ಬ್ಯಾಟ್ಸ್ ಮನ್ಗ್ ಗಳಾಗಿ ಆಯ್ಕೆ ಮಾಡಲಾಗಿದ್ದು, ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಅವರನ್ನು ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಆಗಿ ಆಯ್ಕೆ ಮಾಡಲಾಗಿದೆ.
ದಶಕದ ಏಕದಿನ ತಂಡದಲ್ಲಿ ಮಾಜಿ ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಮತ್ತು ಬೆನ್ ಸ್ಟೋಕ್ಸ್ ಆಲ್ರೌಂಡರ್ ಆಗಿದ್ದರೆ ದಕ್ಷಿಣ ಆಫ್ರಿಕಾ ಇಮ್ರಾನ್ ತಾಹಿರ್ ಏಕೈಕ ಸ್ಪಿನ್ನರ್. ವೇಗದ ಬೌಲರ್ ಆಸ್ಟ್ರೇಲಿಯಾದ ಬೌಲರ್ ಮಿಚೆಲ್ ಸ್ಟಾರ್ಕ್, ನ್ಯೂಜಿಲೆಂಡ್ನ ಟ್ರೆಂಟ್ ಬೌಲ್ಟ್ ಮತ್ತು ಶ್ರೀಲಂಕಾದ ಲಸಿತ್ ಮಾಲಿಂಗ ಸೇರಿದ್ದಾರೆ.
