ಮಡಿಕೇರಿಯಲ್ಲಿ ಮಂಗಳವಾರ ಶ್ರೀರಾಮಮಂದಿರ ನಿಧಿ ಸಮರ್ಪಣಾ ಕಾರ್ಯಾಲಯ ಉದ್ಘಾಟನೆ

December 28, 2020

ಮಡಿಕೇರಿ ಡಿ.28 : ಅಯೋಧ್ಯೆ ಶ್ರೀರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ ಪ್ರಯುಕ್ತ ಜಿಲ್ಲಾ ಕಾರ್ಯಾಲಯದ ಉದ್ಘಾಟನಾ ಸಮಾರಂಭ ಮಡಿಕೇರಿ ನಗರದ ಓಂಕಾರ ಸದನ ಬಳಿ ಇರುವ ನಿಯೋಜಿತ ಕಾರ್ಯಾಲಯ ಕಟ್ಟಡದಲ್ಲಿ ನಡೆಯಲಿದೆ.
ಅಯೋಧ್ಯೆ ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ನ ಸದಸ್ಯರಾದ ಪೇಜಾವರ ಮಠದ ಶ್ರೀವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಕೊಡಗಿನ ಹಿರಿಯ ಕಿರಿಯ ಸ್ವಾಮೀಜಿಗಳು ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ನಂತರ ಸಭಾ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳಿಂದ ಆಶೀರ್ವಚನ ಕಾರ್ಯ ನಡೆಯಲಿದೆ ಎಂದು ಅಯೋಧ್ಯೆ ಶ್ರೀರಾಮಮಂದಿರ ನಿಧಿ ಸಮರ್ಪಣಾ ಅಭಿಯಾನದ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.

error: Content is protected !!