ನಿಯಮ ಉಲ್ಲಂಘಿಸುವ ಪ್ರವಾಸಿಗರ ವಿರುದ್ಧ ಕಠಿಣ ಕ್ರಮ : ಶಾಸಕ ಕೆ.ಜಿ.ಬೋಪಯ್ಯ ಎಚ್ಚರಿಕೆ

December 28, 2020

ಮಡಿಕೇರಿ ಡಿ.28 : ಕೊಡಗು ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮಾಸ್ಕ್ ರಹಿತರಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ತಮಗಿಷ್ಟ ಬಂದಂತೆ ವರ್ತಿಸುವ ಪ್ರವಾಸಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಸೂಚಿಸುವುದಾಗಿ ಶಾಸಕ ಕೆ.ಜಿ. ಬೋಪಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಕೊಡಗಿನತ್ತ ಬರುತ್ತಿದ್ದು, ಸಾಮಾಜಿಕ ಅಂತರ ಏನೆಂದೇ ತಿಳಿಯದಂತೆ ವರ್ತಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲೆಯ ಜನರಿಂದ ಸಾಕಷ್ಟು ದೂರುಗಳು ಕೇಳಿ ಬಂದಿದೆ. ಮಾಸ್ಕ್ ಧರಿಸದವರು, ಸಾಮಾಜಿಕ ಅಂತರ ಕಾಯ್ದುಕೊಳ್ಳದವರು ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ದಂಡ ಸಹಿತ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ ಎಂದರು.
ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರಲು ಸಾಧ್ಯವಿಲ್ಲವೆಂದು ಬೋಪಯ್ಯ ಹೇಳಿದರು.

error: Content is protected !!