ಕೊಡಗಿನಲ್ಲಿ ಕೋವಿಡ್ : 79 ಸಕ್ರಿಯ ಪ್ರಕರಣ

December 28, 2020

ಮಡಿಕೇರಿ ಡಿ.28 : ಜಿಲ್ಲೆಯಲ್ಲಿ ಸೋಮವಾರ 21 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 20 ಪ್ರಕರಣಗಳು ಆರ್‍ಟಿಪಿಸಿಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5732 ಆಗಿದ್ದು, 5578 ಮಂದಿ ಗುಣಮುಖರಾಗಿದ್ದಾರೆ. 79 ಸಕ್ರಿಯ ಪ್ರಕರಣಗಳಿದ್ದು, 75 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 69 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದ್ದು, ಈ ಪೈಕಿ 02 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ, 01 ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 11 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ 11 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 07 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಈ 07 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

error: Content is protected !!