ಕೃಷಿ ಕ್ಷೇತ್ರದಲ್ಲಿ ಐತಿಹಾಸಿಕ ಸುಧಾರಣೆ

December 29, 2020

ನವದೆಹಲಿ ಡಿ.29 : ಕೃಷಿಗೆ ಉತ್ತೇಜನ ನೀಡಲು ಮತ್ತು ರೈತರನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಹಲವು ಐತಿಹಾಸಿಕ ಸುಧಾರಣೆಗಳನ್ನು ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದ ಸಂಗೋಲಾದಿಂದ ಪಶ್ಚಿಮ ಬಂಗಾಳದ ಶಾಲಿಮಾರ್‍ವರೆಗೆ ತೆರಳುವ 100ನೇ “ಕಿಸಾನ್ ರೈಲಿಗೆ” ಚಾಲನೆ ನೀಡಿ ಮಾತನಾಡಿದ ಪ್ರಧಾನಿ, ತಮ್ಮ ಸರ್ಕಾರದ ನೀತಿಗಳು ಸ್ಪಷ್ಟವಾಗಿವೆ ಮತ್ತು ಕೃಷಿ ಕ್ಷೇತ್ರವನ್ನು ಸುಧಾರಿಸುವಲ್ಲಿ ಪಾರದರ್ಶಕವಾಗಿದೆ ಎಂದು ಹೇಳಿದರು.
ರೈತರನ್ನು ಮತ್ತು ಕೃಷಿ ಕ್ಷೇತ್ರವನ್ನು ಸಂಪೂರ್ಣ ಬಲಪಡಿಸುವ ಕಾರ್ಯವನ್ನು ಸರ್ಕಾರ ಮುಂದುವರಿಸಲಿದೆ ಎಂದರು.
ಕೇಂದ್ರದ ಮೂರು ಕೃಷಿ ಸುಧಾರಣಾ ಕಾನೂನುಗಳ ವಿರೋಧಿಸಿ ಕಳೆದ ಒಂದು ತಿಂಗಳಿಂದ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಅವರ ಈ ಹೇಳಿಕೆ ಮಹತ್ವ ಪಡೆದಿದೆ. ಆದರೆ ನೇರವಾಗಿ ಕೃಷಿ ಕಾನೂನುಗಳ ಪ್ರಸ್ತಾಪಿಸದೇ, ತಾವು ರೈತರ ಹಿತಾಸಕ್ತಿ ಕಾಪಾಡುತ್ತಿದ್ದು, ವಿರೋಧ ಪಕ್ಷಗಳು ಅವರನ್ನು ದಾರಿ ತಪ್ಪಿಸುತ್ತವೆ ಎಂದು ಪ್ರತಿಪಾದಿಸಿದ್ದಾರೆ.

error: Content is protected !!