ಕೊಡಗಿನಲ್ಲಿ ಕೋವಿಡ್ : 82ಸಕ್ರಿಯ ಪ್ರಕರಣ

December 29, 2020

ಮಡಿಕೇರಿ ಡಿ.29 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 14 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
14 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 9 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಈ ಪೈಕಿ 9 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5746 ಆಗಿದ್ದು, 5586 ಮಂದಿ ಗುಣಮುಖರಾಗಿದ್ದಾರೆ. 82
ಸಕ್ರಿಯ ಪ್ರಕರಣಗಳಿದ್ದು, 78 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 60 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!