Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:27 AM Tuesday 26-October 2021

ರಾಮಮಂದಿರ ನಿರ್ಮಾಣಕ್ಕೆ ಸಾಮರ್ಥ್ಯ ಕ್ಕನುಗುಣವಾಗಿ ಸಹಕರಿಸಿ : ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮನವಿ

29/12/2020

ಮಡಿಕೇರಿ ಡಿ.29 : ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯಕ್ಕೆ 45 ದಿನಗಳ ಕಾಲ ನಡೆಯುವ ನಿಧಿ ಸಮರ್ಪಣಾ ಅಭಿಯಾನದ ಸಂದರ್ಭ ನಾಡಿನ ಜನತೆ ತಮ್ಮ ಸಾಮರ್ಥ್ಯ ಕ್ಕನುಗುಣವಾಗಿ ಸಹಕರಿಸುವಂತೆ ಅಯೋಧ್ಯೆ ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ನ ಸದಸ್ಯ ಹಾಗೂ ಉಡುಪಿಯ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮನವಿ ಮಾಡಿದ್ದಾರೆ.
ಶ್ರೀರಾಮಮಂದಿರ ನಿರ್ಮಾಣದ ಹಿನ್ನೆಲೆ ಶ್ರೀರಾಮಮಂದಿರ ನಿಧಿ ಸಮರ್ಪಣಾ ಅಭಿಯಾನಕ್ಕೆ ಮಡಿಕೇರಿಯಲ್ಲಿ ಚಾಲನೆ ನೀಡಿದವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಜ.15 ರಿಂದ 45 ದಿನಗಳ ಅಭಿಯಾನ ದೇಶಾದ್ಯಾಂತ ನಡೆಯಲಿದ್ದು, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿ ಮನೆ ಮನೆಗಳಿಗೆ ತೆರೆಳಿ ನಿಧಿ ಸಂಗ್ರಹಿಸಲಿದ್ದಾರೆ. ಜನತೆ ತಮ್ಮ ಸಾಮಥ್ರ್ಯಕ್ಕನುಗುಣವಾಗಿ ಧನ ಸಹಾಯ ಮಾಡಿ ಸಹಕರಿಸಬೇಕು. ಆ ಮೂಲಕ ರಾಮರಾಜ್ಯದ ಕನಸು ನನಸಾಗುವಂತೆ ಮಾಡಬೇಕೆಂದು ಸ್ವಾಮೀಜಿ ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಗೋಹತ್ಯೆ ನಿಷೇಧ ಕಾಯ್ದೆಯನ್ನು ತುಂಬು ಹೃದಯದಿಂದ ಸ್ವಾಗತಿಸುವುದಾಗಿ ಹೇಳಿದರು.