ಮಡಿಕೇರಿಯಲ್ಲಿ ಕನ್ನಡ ಜಾಗೃತಿ ಸಮಿತಿಯಿಂದ ಕುವೆಂಪು ನಮನ

December 29, 2020

ಮಡಿಕೇರಿ ಡಿ.29 : ವಿಶ್ವ ಮಾನವತೆ ಸಾರಿದ ಕುವೆಂಪು ಅವರ ಜನ್ಮ ದಿನದ ಅಂಗವಾಗಿ ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ವತಿಯಿಂದ ರಾಷ್ಟ್ರ ಕವಿ ಕುವೆಂಪು ಅವರಿಗೆ ಗೌರವ ನಮನ ಸಲ್ಲಿಸಲಾಯಿತು.
ಮಡಿಕೇರಿಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಮೀಪವಿರುವ ಕುವೆಂಪು ಅವರ ಪುತ್ಥಳಿಗೆ ಸಮಿತಿಯ ಪ್ರಮುಖರು ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು.
ಈ ಸಂದರ್ಭ ಸಮಿತಿಯ ಸದಸ್ಯರುಗಳಾದ ಎಸ್.ಮಹೇಶ್,ಭಾರತಿ ರಮೇಶ್, ಈ.ರಾಜು,ರಂಜಿತಾ ಕಾರ್ಯಪ್ಪ,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಲೋಕೇಶ್ ಸಾಗರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ಪ್ರೇಮನಾಥ್, ಪ್ರಮುಖರಾದ ರಮೇಶ್,ಲಕ್ಷ್ಮೀಕಾಂತ್ ಹಾಜರಿದ್ದರು.

error: Content is protected !!