ಪತ್ರಕರ್ತ ಬೊಳ್ಳಜಿರ ಬಿ.ಅಯ್ಯಪ್ಪಗೆ ಪ್ರತಿಷ್ಠಿತ ಪ.ಗೋ ಪ್ರಶಸ್ತಿ

December 29, 2020

ಮಡಿಕೇರಿ ಡಿ.29 : ಕೊಡಗಿನ ಪತ್ರಕರ್ತ ಬೊಳ್ಳಜಿರ ಬಿ.ಅಯ್ಯಪ್ಪ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ.ಗೋ ಪ್ರಶಸ್ತಿ ಲಭಿಸಿದೆ.
2019 ಜುಲೈ 24 ರಂದು ಕಾವೇರಿ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟಗೊಂಡ “ಬದುಕಿಗಾಗಿ ಅಡುಗೆ ಉತ್ಪನ್ನಗಳ ತಯಾರಿಕೆಯಲ್ಲಿ ಮಗ್ನರಾಗಿರುವ ಕಾಲೂರಿನ ಸಂತ್ರಸ್ತ ಮಹಿಳೆಯರು” ವರದಿಗೆ ಈ ಪ್ರಶಸ್ತಿ ದೊರೆತ್ತಿದೆ.
2018 ರಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಮನೆ, ಆಸ್ತಿಯನ್ನು ಕಳೆದುಕೊಂಡು ಬೀದಿಗೆ ಬಿದ್ದ ಕಾಲೂರು ಕುಗ್ರಾಮದ ಮಹಿಳೆಯರು ಸ್ವಾವಲಂಬಿ ಬದುಕಿನ ಮೂಲಕ ಯಶಸ್ಸನ್ನು ಕಂಡ ಯಶೋಗಾಥೆಯ ಮೇಲೆ ಬೆಳಕು ಚೆಲ್ಲುವ ವರದಿ ಇದಾಗಿತ್ತು.
ಇದೇ ಡಿ.31 ರಂದು ಮಂಗಳೂರಿನಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಯ್ಯಪ್ಪ ಪ್ರಶಸ್ತಿ ಪಡೆಯಲಿದ್ದಾರೆ. ತಮಗೆ ಲಭಿಸಿದ ಮೊದಲ ಪ್ರಶಸ್ತಿಯ ಬಗ್ಗೆ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

error: Content is protected !!