ಸೋಮವಾರಪೇಟೆಯಲ್ಲಿ ಅಪರಾಧ ತಡೆ ಮಾಸಾಚರಣೆ : ಹೋಂ ಸ್ಟೇ, ರೆಸಾರ್ಟ್‍ಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸಿ : ಡಿವೈಎಸ್‍ಪಿ ಶೈಲೇಂದ್ರ

December 29, 2020

ಸೋಮವಾರಪೇಟೆ ಡಿ. 29 : ವರ್ಷಾಚರಣೆ ಅಂಗವಾಗಿ ತಾಲೂಕಿನ ಹೋಂ ಸ್ಟೇ, ರೆಸಾರ್ಟ್‍ಗಳಿಗೆ ಪ್ರವಾಸಿಗರು ಆಗಮಿಸಲಿದ್ದು, ಮಾಲೀಕರು ಕಡ್ಡಾಯವಾಗಿ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಡಿವೈಎಸ್‍ಪಿ ಶೈಲೇಂದ್ರ ಹೇಳಿದರು.
ಪೊಲೀಸ್ ಇಲಾಖೆಯ ವತಿಯಿಂದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಹೋಂ ಸ್ಟೇ ಮಾಲೀಕರ ಸಭೆಯಲ್ಲಿ ಅವರು ಮಾತನಾಡಿದರು. ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಹಾಕಿರಬೇಕು. ಪ್ರತಿಯೊಬ್ಬರ ವಿಳಾಸವನ್ನು ಬರೆದಿಡಬೇಕು. ಮೋಜು ಮಸ್ತಿಗೆ ಅವಕಾಶ ಮಾಡಿಕೊಡಬಾರದು. ರಾತ್ರಿ ಹತ್ತು ಗಂಟೆಯ ನಂತರ ಯಾವುದೇ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಹೇಳಿದರು.
ವೇದಿಕೆಯಲ್ಲಿ ಸರ್ಕಲ್‍ಇನ್ಸ್‍ಪೆಕ್ಟರ್ ಮಹೇಶ್, ಠಾಣಾಧಿಕಾರಿ ಶ್ರೀಧರ್ ಇದ್ದರು.

error: Content is protected !!