ಕೊಡಗಿನಲ್ಲಿ ಕೋವಿಡ್ : 5592 ಮಂದಿ ಗುಣಮುಖ

December 30, 2020

ಮಡಿಕೇರಿ ಡಿ. 30 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 6 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5752 ಆಗಿದ್ದು, 5592 ಮಂದಿ ಗುಣಮುಖರಾಗಿದ್ದಾರೆ. 82
ಸಕ್ರಿಯ ಪ್ರಕರಣಗಳಿದ್ದು, 78 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 55 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!