ಗ್ರಾ.ಪಂ. ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ಭೇಟಿ

December 30, 2020

ಮಡಿಕೇರಿ ಡಿ. 30 : ಗ್ರಾ.ಪಂ.ಚುನಾವಣೆ ಸಂಬಂಧ ಜಿಲ್ಲೆಯಲ್ಲಿ 101 ಗ್ರಾ.ಪಂ.ಗಳಿಗೆ ಚುನಾವಣೆ ನಡೆದಿದ್ದು, ಸುಸೂತ್ರವಾಗಿ ಮತ ಎಣಿಕೆ ಆರಂಭವಾಗಿದೆ. ಈ ಹಿನ್ನಲೆ ಮತ ಎಣಿಕೆ ಕೇಂದ್ರದ‌ ಬಳಿ ನಿರ್ಮಿಸಿರುವ ಭದ್ರತಾ ಕೊಠಡಿಯನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಮತ್ತು ಚುನಾವಣಾ ವೀಕ್ಷಕರಾದ ಎ.ದೇವರಾಜು ಅವರ ಸಮ್ಮುಖದಲ್ಲಿ ತೆರೆಯಲಾಯಿತು.

ಚುನಾವಣಾ ಮೇಲುಸ್ತುವಾರಿ ನಿಲೇಶ್ ಸಿಂದೆ, ಹೆಚ್ವುವರಿ ಜಿಲ್ಲಾಧಿಕಾರಿ ರೂಪ, ತಹಶೀಲ್ದಾರ್ ಮಹೇಶ್, ಡಿವೈಎಸ್ ಪಿ ದಿನೇಶ್ ಕುಮಾರ್ ಇತರರು ಇದ್ದರು.

ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಕುಶಾಲನಗರದಲ್ಲಿ ಮತ ಎಣಿಕೆ ಸುಸೂತ್ರವಾಗಿ ನಡೆಯುತ್ತಿದೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾಹಿತಿ ನೀಡಿದ್ದಾರೆ.

error: Content is protected !!