ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ

30/12/2020

ಬೆಂಗಳೂರು ಡಿ.30 : ಕೊರೋನಾ ಸಂಕಷ್ಟದ ನಡುವೆಯೂ ಬಂಡವಾಳ ಹೂಡಿಕೆ ಪ್ರಸ್ತಾವದಲ್ಲಿ ದೇಶದಲ್ಲಿ ನಮ್ಮ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಮಾಹಿತಿ ಅನ್ವಯ, ನಮ್ಮ ರಾಜ್ಯದಲ್ಲಿ 1,54,937 ಕೋಟಿ ಮೊತ್ತದ 95 ಹೂಡಿಕೆಯ ಪ್ರಸ್ತಾವನೆಗಳು ನೋಂದಣಿಯಾಗಿವೆ. ಈ ಮೂಲಕ ನಮ್ಮ ರಾಜ್ಯವು ಹೂಡಿಕೆ ಪ್ರಸ್ತಾವದ ವಿಚಾರದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಇಂದು ನಗರದ ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ “ಮುಕ್ತ ಅವಕಾಶದ ಮೂಲಕ ಕೈಗಾರಿಕೆಗಳಿಗೆ ಕಡಿಮೆ ದರದಲ್ಲಿ ವಿದ್ಯುತ್ ಶಕ್ತಿಯನ್ನು ಪೂರೈಸುವ” ಬಗ್ಗೆ ಅಸೋಚಾಮ್ ಆಯೋಜಿಸಿದ್ದ ವೆಬಿನಾರನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಮಾಹಿತಿ ಅನ್ವಯ ನಮ್ಮ ರಾಜ್ಯದಲ್ಲಿ 1,54,937 ಕೋಟಿ ಮೊತ್ತದ 95 ಹೂಡಿಕೆಯ ಪ್ರಸ್ತಾವನೆಗಳು ನೋಂದಣಿಯಾಗಿವೆ.