ವಲಸಿಗರ ಸಮೀಕ್ಷೆಗೆ ಮುಂದಾದ ಸರ್ಕಾರ

December 30, 2020

ಬೆಂಗಳೂರು ಡಿ.30 : ಕೋವಿಡ್-19 ನಿಂದಾಗಿ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ಹಿಂತಿರುಗಿರುವವರ ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ನಗರ ಪ್ರದೇಶಗಳನ್ನು ಬಿಟ್ಟು ವಾಪಸ್ ತಮ್ಮ ಊರು/ ಗ್ರಾಮಗಳಿಗೆ ಬಂದಿರುವವರಿಗೆ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಇವರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವುದು ಸರ್ಕಾರದ ಈ ಸಮೀಕ್ಷೆಯ ಹಿಂದಿನ ಉದ್ದೇಶವಾಗಿದ್ದು, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಈ ಸಮೀಕ್ಷೆ, ಯೋಜನೆಯ ಪೂರ್ಣಗೊಳಿಸುವ ಜವಾಬ್ದಾರಿಯನ್ನು ನೀಡಲಾಗಿದೆ.
ಈ ಸಮೀಕ್ಷೆ ಒಂದು ತಿಂಗಳ ಹಿಂದೆಯೇ ನಡೆಯಬೇಕಿತ್ತು. ಆದರೆ ಗ್ರಾಮ ಪಂಚಾಯ್ತಿ ಚುನಾವಣೆಯ ನೀತಿ ಸಂಹಿತಿ ಜಾರಿಗೆ ಬಂದ ಹಿನ್ನೆಲೆಯಲ್ಲಿ ವಿಳಂಬವಾಯಿತು. ಈಗ ಇಲಾಖೆಯ ಅಧಿಕಾರಿಗಳು ವಲಸೆ ಹೋಗಿ ವಾಪಸ್ಸಾಗಿರುವ ಮಂದಿಯ ಹೆಸರು, ವಿಳಾಸ, ನಗರ ಪ್ರದೇಶಗಳಲ್ಲಿ ಮಾಡುತ್ತಿದ್ದ ನೌಕರಿ, ಈಗ ಉದ್ಯೋಗ ಮಾಡುತ್ತಿದ್ದಾರೋ ಇಲ್ಲವೋ ಎಂಬ ಬಗ್ಗೆ ವಿಸ್ತೃತ ಮಾಹಿತಿ ಕಲೆಹಾಕಲಿದ್ದಾರೆ.

error: Content is protected !!