ಗಣರಾಜ್ಯೊತ್ಸವದ ಪ್ರಯುಕ್ತ ರಿಯಾಯಿತಿ ದರಗಳಲ್ಲಿ ಪುಸ್ತಕ ಮಾರಾಟ

December 30, 2020

ಮಡಿಕೇರಿ ಡಿ.30 : ಗಣರಾಜ್ಯೊತ್ಸವದ ಪ್ರಯುಕ್ತ 2021ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್‍ನಲ್ಲಿ ಕೂಡ ಶೇ.50 ರಿಯಾಯಿತಿ ಲಭ್ಯವಿದೆ.
ಇದಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇ.50ರ ರಿಯಾಯಿತಿಯಲ್ಲಿ ಲಭ್ಯವಿದೆ. ಪ್ರಾಧಿಕಾರದ ವೆಬ್‍ಸೈಟ್ www.kannadapustakapradhikara.com ದಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ ಆನ್‍ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದು.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 446 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!