ವಿಕಲಚೇತನರಿಂದ ಅರ್ಜಿ ಆಹ್ವಾನ

December 30, 2020

ಮಡಿಕೇರಿ ಡಿ.30 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2020-21 ನೇ ಸಾಲಿನಲ್ಲಿ ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರವನ್ನು ಪಡೆಯಲು ಹಾಗೂ ಎಸ್‍ಎಸ್‍ಎಲ್‍ಸಿ ಮತ್ತು ನಂತರ ವ್ಯಾಸಂಗ ಮಾಡುತ್ತಿರುವ ಶೇ.40 ಕ್ಕಿಂತ ಹೆಚ್ಚು ದೃಷ್ಟಿದೋಷವಿರುವ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ನೀಡುವ ಯೋಜನೆಗಳ ಸೌಲಭ್ಯವನ್ನು ಅರ್ಹ ವಿಕಲಚೇತನರು ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ. 08272-295829 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!